Psalms 71:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
Kannada BSI Bible 2016
ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
Kannada Bible (KNCL) BSI 2016
ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.