Psalms 71:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
Kannada BSI Bible 2016
ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ಕೃತ್ಯಗಳನ್ನು ನಡಿಸಿದ ದೇವರೇ, ನಿನಗೆ ಸಮಾನರು ಯಾರು?
Kannada Bible (KNCL) BSI 2016
ನಿನ್ನ ಶಕ್ತಿ, ನಿನ್ನ ನೀತಿ ದೇವಾ, ಗಗನ ಮುಟ್ಟುತ್ತಿಹವು I ಮಹತ್ಕಾರ್ಯಗಳೆಸಗಿದ ನಿನಗೆ ದೇವಾ, ಯಾರು ಸಾಟಿಯು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?