Psalms 71:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ ನಂಬಿಕೆಗಸ್ತಿಕೆಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
Kannada BSI Bible 2016
ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲ್ಯರ ಸದಮಲಸ್ವಾವಿುಯೇ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
Kannada Bible (KNCL) BSI 2016
ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದೇವರೇ, ನಾನು ನಿಮ್ಮನ್ನು ಸ್ತುತಿಸುವೆನು. ನಿಮ್ಮ ನಂಬಿಗಸ್ತಿಕೆಗಾಗಿ ವೀಣೆಯಿಂದ ಕೊಂಡಾಡುವೆನು. ಇಸ್ರಾಯೇಲರ ಪರಿಶುದ್ಧರೇ, ಕಿನ್ನರಿಯಿಂದ ನಿಮ್ಮನ್ನು ಸ್ತುತಿಸುವೆನು.