Psalms 71:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಪ್ರಾಣವು ಉಲ್ಲಾಸಗೊಂಡಿದೆ. ನನ್ನ ತುಟಿಗಳಿಂದ ನಿನ್ನನ್ನು ಹಾಡಿ ಕೊಂಡಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.
Kannada BSI Bible 2016
ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತುಟಿಗಳೂ ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.
Kannada Bible (KNCL) BSI 2016
ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನನ್ನು ಬಿಡಿಸಿದ್ದಕ್ಕಾಗಿ ನನ್ನ ತುಟಿಗಳು ಆನಂದದಿಂದ ಹಾಡಿ ಸ್ತುತಿಸುತ್ತವೆ.