Psalms 71:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತುಹೋಗಿ ಅವಮಾನಕ್ಕೀಡಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.
Kannada BSI Bible 2016
ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವದು.
Kannada Bible (KNCL) BSI 2016
ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.