Psalms 71:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹುಟ್ಟಿದಂದಿನಿಂದಲೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನಾನು ಜನಿಸಿದಂದಿನಿಂದಲೂ ನೀನೇ ನನಗೆ ಆಧಾರವಾಗಿರುವೆ. ನಾನು ನಿನ್ನನ್ನು ಕೊಂಡಾಡುತ್ತಲೇ ಇರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
Kannada BSI Bible 2016
ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹುಟ್ಟಿದಂದಿನಿಂದ ನಿನ್ನನ್ನೇ ಆತುಕೊಂಡಿದ್ದೇನೆ; ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವದು ನಿನ್ನಲ್ಲಿಯೇ.
Kannada Bible (KNCL) BSI 2016
ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಟ್ಟಿನಿಂದ ನೀವೇ ನನ್ನ ಭರವಸೆ. ತಾಯಿಯ ಗರ್ಭದಿಂದ ನೀವೇ ನನ್ನನ್ನು ಹೊರಗೆ ತಂದಿದ್ದೀರಿ. ನಾನು ಯಾವಾಗಲೂ ನಿಮ್ಮನ್ನು ಸ್ತುತಿಸುತ್ತಿರುವೆನು.