Psalms 72:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
Kannada BSI Bible 2016
ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಾಳಲಿ; ಶೆಬಾ ಪ್ರಾಂತದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳುಂಟಾಗಲಿ.
Kannada Bible (KNCL) BSI 2016
ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.