Psalms 72:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಆವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
Kannada BSI Bible 2016
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
Kannada Bible (KNCL) BSI 2016
ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.