Psalms 72:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
Kannada BSI Bible 2016
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್‌. ಆಮೆನ್‌.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.
Kannada Bible (KNCL) BSI 2016
ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.