Psalms 72:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
Kannada BSI Bible 2016
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
Kannada Bible (KNCL) BSI 2016
ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.