Psalms 73:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಾವು ನಿದ್ರೆಯಿಂದ ಎಚ್ಚರಗೊಂಡಾಗ ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು. ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ ನೀನು ಅವರನ್ನು ಮಾಯಗೊಳಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.
Kannada BSI Bible 2016
ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಚ್ಚರವಾದವನು ಕನಸನ್ನು ಹೇಗೋ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.
Kannada Bible (KNCL) BSI 2016
ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.