Psalms 73:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.
Kannada BSI Bible 2016
ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.
Kannada Bible (KNCL) BSI 2016
ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.