Psalms 74:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
Kannada BSI Bible 2016
ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್‌ ಪರ್ವತವನ್ನೂ ಜ್ಞಾಪಕಮಾಡಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡಿಸಿ ಸಂಪಾದಿಸಿಕೊಂಡ ನಿನ್ನ ಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್‍ಗಿರಿಯನ್ನು ಮರೆಯಬೇಡ.
Kannada Bible (KNCL) BSI 2016
ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.