Psalms 74:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
Kannada BSI Bible 2016
ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ಬಿಜಯಮಾಡು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡಿಸಿಬಿಟ್ಟಿದ್ದಾನೆ.
Kannada Bible (KNCL) BSI 2016
ಬಿಜಯಮಾಡು ಪಾಳುಬಿದ್ದಿರುವ ಹಳೆಯ ಆಲಯಕೆ I ಶತ್ರು ಕೆಡವಿಹನು ನೋಡು ಗರ್ಭಗುಡಿಯನೇ ಕೆಳಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿತ್ಯ ನಾಶವಾದ ಈ ಪ್ರದೇಶಗಳ ಕಡೆಗೂ ಈ ಪರಿಶುದ್ಧ ನಿವಾಸವನ್ನು ವೈರಿಗಳು ಹಾಳುಮಾಡಿದ್ದರ ಕಡೆಗೂ ನಿಮ್ಮ ಹೆಜ್ಜೆಗಳನ್ನು ತಿರುಗಿಸಿರಿ.