Psalms 75:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ”‘ ಎಂದು ಹೇಳುವೆನು. (Verses 4-5)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
Kannada BSI Bible 2016
ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಮ್ಮೆಗಾರರೇ, ಕೊಚ್ಚಿಕೊಳ್ಳಬೇಡಿರಿ; ದುಷ್ಟರೇ, ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
Kannada Bible (KNCL) BSI 2016
ಗರ್ವಿಗಳೇ, ಸಾಕುಮಾಡಿ ನಿಮ್ಮ ಸೊಕ್ಕುಮಾತುಗಳನು I ದುರ್ಜನರೇ, ತೋರಬೇಡಿ ನಿಮ್ಮ ಕೋರೆಕೊಂಬುಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.