Psalms 77:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಟ್ಟವಾದ ಕಪ್ಪುಮೋಡಗಳು ಮಳೆಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
Kannada BSI Bible 2016
ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಘಮಂಡಲವು ಮಳೆಗರೆಯಿತು; ಅಂತರಿಕ್ಷವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
Kannada Bible (KNCL) BSI 2016
ಮಳೆಗರಿಯಿತಾ ಮೇಘಮಂಡಲವು I ಭೋರ್ಗರೆಯಿತಾಗ ಅಂತರಿಕ್ಷವು I ಮಿಂಚಿದವು ಎಲ್ಲೆಡೆ ನಿನ್ನಂಬುಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಡಗಳು ನೀರನ್ನು ಸುರಿಸಿದವು. ಆಕಾಶಗಳು ಗುಡುಗಿನಿಂದ ಶಬ್ದಮಾಡಿದವು. ನಿಮ್ಮ ಬಾಣಗಳು ಹಿಂದೆಯೂ ಮುಂದೆಯೂ ಹಾರಿ ಬಂದವು.