Psalms 77:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಆಶ್ಚರ್ಯದಿಂದ ಹೀಗೆಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
Kannada BSI Bible 2016
ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ?
Kannada Bible (KNCL) BSI 2016
ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿರಂತರವಾಗಿ ಯೆಹೋವ ದೇವರು ತಳ್ಳಿಬಿಡುವರೋ? ಇನ್ನೆಂದಿಗೂ ದಯೆತೋರದೆ ಇರುವರೋ?