Psalms 78:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರು ಹೇಳಿದ್ದನ್ನು ಕೇಳಿ ಯೆಹೋವನು ಕೋಪಗೊಂಡನು. ಆತನು ಯಾಕೋಬ್ಯರ ಮೇಲೆಯೂ ಇಸ್ರೇಲರ ಮೇಲೆಯೂ ಕೋಪಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
Kannada BSI Bible 2016
ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ ಆತನ ರಕ್ಷಣೆಯನ್ನು ನಂಬದೆಯೂ ಹೋದದರಿಂದ
Kannada Bible (KNCL) BSI 2016
ಇದನ್ನು ಕೇಳಿ ಸಿಡಿದೆದ್ದನು ಪ್ರಭು ರೋಷದಿಂದಲೆ I ಉಕ್ಕೇರಿತಾತನ ಕೋಪ ಇಸ್ರಯೇಲರ ಮೇಲೆ I ಕಾರಿದನು ಕೋಪಾಗ್ನಿಯನು ಯಕೋಬಕುಲದ ಮೇಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.