Psalms 78:55 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.
Kannada BSI Bible 2016
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.
Kannada Bible (KNCL) BSI 2016
ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.