Psalms 79:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
Kannada BSI Bible 2016
ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.
Kannada Bible (KNCL) BSI 2016
ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.