Psalms 79:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.
Kannada BSI Bible 2016
ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ.
Kannada Bible (KNCL) BSI 2016
“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.