Psalms 79:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಯವಿಟ್ಟು, ಸೆರೆಯಾಳುಗಳ ಗೋಳಾಟಕ್ಕೆ ಕಿವಿಗೊಡು! ಸಾಯಲಿರುವವರನ್ನು ನಿನ್ನ ಮಹಾಶಕ್ತಿಯಿಂದ ಕಾಪಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
Kannada BSI Bible 2016
ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
Kannada Bible (KNCL) BSI 2016
ಸೆರೆಹೋಗಿರುವವರ ನರಳಾಟಕೆ ಕಿವಿಗೊಡು ನೀನು I ನಿನ್ನ ಶಕ್ತಿ ಕಾದಿಡಲಿ ಸಾವಿಗೀಡಾಗಿರುವ ಅವರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಯವರ ನಿಟ್ಟುಸಿರು ನಿಮ್ಮ ಮುಂದೆ ಬರಲಿ. ನಿಮ್ಮ ಮಹಾಶಕ್ತಿಯ ಪ್ರಕಾರ ಸಾಯುವುದಕ್ಕಿರುವವರನ್ನು ಕಾಪಾಡಿರಿ.