Psalms 79:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.
Kannada BSI Bible 2016
ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹುವಾಗಿ ಕುಗ್ಗಿಹೋಗಿದ್ದೇವೆ.
Kannada Bible (KNCL) BSI 2016
ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವಿಕರ ಪಾಪಗಳನ್ನು ನಮಗೆ ವಿರೋಧವಾಗಿ ಜ್ಞಾಪಕ ಮಾಡಿಕೊಳ್ಳಬೇಡಿರಿ. ನಿಮ್ಮ ಕರುಣೆಯು ಬೇಗ ನಮ್ಮನ್ನು ಎದುರುಗೊಳ್ಳಲಿ. ನಾವು ಬಹಳವಾಗಿ ಕುಗ್ಗಿಹೋಗಿದ್ದೇವೆ.