Psalms 79:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
Kannada BSI Bible 2016
ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
Kannada Bible (KNCL) BSI 2016
ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ, ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ. ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ. ನಮ್ಮ ಪಾಪಗಳನ್ನು ತೊಳೆದುಬಿಡಿರಿ.