Psalms 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
Kannada BSI Bible 2016
ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ವಿರೋಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವದಕ್ಕೋಸ್ಕರ ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
Kannada Bible (KNCL) BSI 2016
ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.