Psalms 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
Kannada BSI Bible 2016
ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ.
Kannada Bible (KNCL) BSI 2016
ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.