Psalms 80:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
Kannada BSI Bible 2016
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
Kannada Bible (KNCL) BSI 2016
ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.