Psalms 80:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?
Kannada BSI Bible 2016
ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವದೇವರೇ, ನಿನಗೆ ಮೊರೆಯಿಡುವ ನಿನ್ನ ಪ್ರಜೆಗೆ ಇನ್ನೆಷ್ಟರವರೆಗೆ ಮುನಿದಿರುವಿ?
Kannada Bible (KNCL) BSI 2016
ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?