Psalms 80:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ. ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
Kannada BSI Bible 2016
ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
Kannada Bible (KNCL) BSI 2016
ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.