Psalms 81:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಾದ ನಾನೇ ನಿನ್ನ ದೇವರು. ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ. ಇಸ್ರೇಲೇ, ನಿನ್ನ ಬಾಯನ್ನು ತೆರೆ, ಆಗ ನಾನು ನಿನಗೆ ತಿನ್ನಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
Kannada BSI Bible 2016
ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ಐಗುಪ್ತದಿಂದ ಕರತಂದ ಯೆಹೋವನೆಂಬ ನಾನೇ ನಿಮ್ಮ ದೇವರು. ಅಗಲವಾಗಿ ಬಾಯಿದೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
Kannada Bible (KNCL) BSI 2016
“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ; ನಿಮ್ಮ ಬಾಯಿಯನ್ನು ಅಗಲವಾಗಿ ತೆರೆ, ಆಗ ಅದನ್ನು ತುಂಬಿಸುವೆನು.