Psalms 82:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವರಿಗೆ ಏನೂ ಗೊತ್ತಿಲ್ಲ. ಅವರಿಗೆ ಏನೂ ಅರ್ಥವಾಗುವುದಿಲ್ಲ! ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
Kannada BSI Bible 2016
ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಬುದ್ಧಿಹೀನರೂ ವಿವೇಕ ಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂವಿುಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
Kannada Bible (KNCL) BSI 2016
ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ. ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ.