Psalms 83:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.
Kannada BSI Bible 2016
ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.
Kannada Bible (KNCL) BSI 2016
ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮ ನಾಮವನ್ನು ಅವರು ಹುಡುಕುವಂತೆ ಅವರ ಮುಖಗಳನ್ನು ನಾಚಿಕೆಯಿಂದ ತುಂಬಿಸಿರಿ.