Psalms 83:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ “ಇಸ್ರೇಲ್” ಎಂಬ ಹೆಸರೇ ಅಳಿದುಹೋಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.
Kannada BSI Bible 2016
ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆಯೂ ಅವರನ್ನು ಸಂಹರಿಸೋಣ ಅಂದುಕೊಳ್ಳುತ್ತಾರೆ.
Kannada Bible (KNCL) BSI 2016
ಇಂತೆನ್ನುತಿಹರು: “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.