Psalms 84:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
Kannada BSI Bible 2016
ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
Kannada Bible (KNCL) BSI 2016
ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀಶ್ವರ I ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ I ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.