Psalms 84:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. ಮುಂಗಾರು ಮಳೆಯು ಅದನ್ನು ನೀರಿನ ತೊರೆಗಳಿಂದ ಸಮೃದ್ಧಿಗೊಳಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
Kannada BSI Bible 2016
ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣ್ಣೀರಿನ ತಗ್ಗನ್ನು ದಾಟುವಾಗ ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯೂ ಅದನ್ನು ಸಮೃದ್ಧಿಗೊಳಿಸುತ್ತದೆ.
Kannada Bible (KNCL) BSI 2016
ದಾಟುವಾಗ ಬಾಕಾ ಕಣಿವೆಯನು I ಚಿಲುಮೆಗಳನಾಗಿ ಮಾಡುವರದನು II ಮುಂಗಾರು ಮಳೆಯು ಸುರಿಯಲು I ತುಂಬಿ ತುಳುಕುವುದಾ ಸರಸಿಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.