Psalms 86:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಅವರು ನನ್ನನ್ನು ಗೌರವಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.
Kannada BSI Bible 2016
ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕೆ ಕಾದಿದೆ. ಅವರು ನಿನ್ನನ್ನು ಲಕ್ಷಿಸುವದಿಲ್ಲ.
Kannada Bible (KNCL) BSI 2016
ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಬಲಾತ್ಕಾರಿಗಳ ಗುಂಪು ನನ್ನ ಪ್ರಾಣವನ್ನು ಹುಡುಕುತ್ತದೆ. ಅವರು ನಿಮ್ಮನ್ನು ಗೌರವಿಸುವವರಲ್ಲ.