Psalms 86:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. ನಿನ್ನ ಸೇವಕನ ಮಗನನ್ನು ರಕ್ಷಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.
Kannada BSI Bible 2016
ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.
Kannada Bible (KNCL) BSI 2016
ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕಡೆಗೆ ತಿರುಗಿಕೊಂಡು ನನ್ನನ್ನು ಕರುಣಿಸಿರಿ. ನಿಮ್ಮ ಸೇವಕನಿಗೆ ನಿಮ್ಮ ಬಲವನ್ನು ತೋರಿಸಿರಿ. ನನ್ನ ತಾಯಿ ನಿನ್ನ ಸೇವೆಮಾಡಿದಂತೆ ನಾನು ಸಹ ಸೇವೆಮಾಡುವುದರಿಂದ ನನ್ನನ್ನು ರಕ್ಷಿಸಿರಿ.
Recommended Reading