Psalms 87:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
Kannada BSI Bible 2016
ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ ಬಾಬೆಲ್ ದೇಶಗಳವರನ್ನು ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್ ಜನಾಂಗಗಳು ಅಲ್ಲೇ ಹುಟ್ಟಿದವು ಎಂಬದೇ.
Kannada Bible (KNCL) BSI 2016
“ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”