Psalms 88:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.
Kannada BSI Bible 2016
ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಯೊಡ್ಡಿ ನಿನಗೆ ಮೊರೆಯಿಡುತ್ತೇನೆ.
Kannada Bible (KNCL) BSI 2016
ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ. ಯೆಹೋವ ದೇವರೇ, ದಿನವೆಲ್ಲಾ ನಿಮ್ಮನ್ನು ಕರೆಯುತ್ತೇನೆ. ನಾನು ನಿಮ್ಮ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.