Psalms 89:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
Kannada BSI Bible 2016
ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಕ್ಷಿಣೋತ್ತರದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್ ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿಮಾಡುತ್ತವೆ.
Kannada Bible (KNCL) BSI 2016
ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.