Psalms 89:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು?
Kannada BSI Bible 2016
ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ.
Kannada Bible (KNCL) BSI 2016
ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು?