Psalms 89:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.
Kannada BSI Bible 2016
ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವದು; ನಿನ್ನ ಸತ್ಯತೆಯನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವದು.
Kannada Bible (KNCL) BSI 2016
ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು.