Psalms 89:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
Kannada BSI Bible 2016
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.
Kannada Bible (KNCL) BSI 2016
ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.