Psalms 89:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
Kannada BSI Bible 2016
ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರದ ಅಲ್ಲಕಲ್ಲೋಲಗಳನ್ನು ಅಂಕೆಯಲ್ಲಿಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
Kannada Bible (KNCL) BSI 2016
ಕಡಲ ಕಲ್ಲೋಲಗಳನ್ನೆಲ್ಲ ಅಂಕೆಯಲಿ ಇಡುವವನು ನೀನು I ತರಂಗವೇಳುವಾಗಲು ಕೂಡ ತಡೆಹಿಡಿವವನು ನೀನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.