Psalms 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
Kannada BSI Bible 2016
ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.
Kannada Bible (KNCL) BSI 2016
ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.