Psalms 9:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
Kannada BSI Bible 2016
ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.
Kannada Bible (KNCL) BSI 2016
ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.