Psalms 9:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
Kannada BSI Bible 2016
ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
Kannada Bible (KNCL) BSI 2016
ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.