Psalms 9:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತುಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
Kannada BSI Bible 2016
ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವದಿಲ್ಲ; ದೀನರ ನಿರೀಕ್ಷಣೆಯು ಕೆಡುವದೇ ಇಲ್ಲ.
Kannada Bible (KNCL) BSI 2016
ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ; ಕುಗ್ಗಿದವರ ನಿರೀಕ್ಷೆ ಎಂದೆಂದಿಗೂ ನಾಶವಾಗುವುದಿಲ್ಲ.