Psalms 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ. ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
Kannada BSI Bible 2016
ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿಸಿದ ಅವರ ಕೋಟೆಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
Kannada Bible (KNCL) BSI 2016
ನಿಶ್ಶೇಷವಾಗಿ ಹೋದರು ವಿರೋಧಿಗಳು I ನಾಶವಾಗಿ ಹೋದವು ಅವರ ನಗರಗಳು I ಇಲ್ಲವಾದವು ಅವರ ಯಾವ ನೆನಪುಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.