Psalms 90:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು. ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
Kannada BSI Bible 2016
ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉದಯದಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
Kannada Bible (KNCL) BSI 2016
ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ I ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಮ್ಮನ್ನು ತೃಪ್ತಿಪಡಿಸಿರಿ. ಆಗ ನಮ್ಮ ದಿನಗಳೆಲ್ಲಾ ಉತ್ಸಾಹ ಧ್ವನಿಗೈದು ನಿಮ್ಮಲ್ಲಿ ಸಂತೋಷಪಡುವೆವು.